ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕೋಲ್ಡ್ ವಾರ್ ನಡೆಯುತ್ತಿಲ್ಲ. ಶೀತಲ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರೇಣುಕಾಚಾರ್ಯ ಅವರ ಮಾತುಗಳಿಂದ ಅರ್ಥವಾಗುವುದಿಲ್ಲವೇ? ಕಾಂಗ್ರೆಸ್ ಪಕ್ಷಕ್ಕೆ ಯಾರೆಲ್ಲಾ ಬರುತ್ತಾರೋ ಗೊತ್ತಿಲ್ಲ. ಆದರೆ ಪಕ್ಷಕ್ಕೆ ಬನ್ನಿ ಎಂದು ನಾನು ಯಾರನ್ನೂ ಆಹ್ವಾನಿಸುವುದಿಲ್ಲ ಎಂದಿದ್ದಾರೆ.
ಕೋವಿಡ್ ಮೃತರ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ: ರೆಡ್ಡಿ
ಇನ್ನು, ಸರ್ಕಾರವೇ ನೀಡಿರುವ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಕೋವಿಡ್ ಬಲಿಯಾದ ಒಟ್ಟು ಮಂದಿಯ ಪೈಕಿ ಶೇ.7ರಷ್ಟು ಕುಟುಂಬಸ್ಥರಿಗೆ ಮಾತ್ರವೇ ಪರಿಹಾರ ನೀಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ 1.5 ಲಕ್ಷ ಹಾಗೂ ರಾಜ್ಯದ ಇತರೆಡೆ 1.5 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ. ಅವರಿಗೆ ವೈದ್ಯಕೀಯ ಕಿಟ್ ವಿತರಿಸಿಲ್ಲ. ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆಯನ್ನು ತಡೆಯಲೆಂದೇ ಸರ್ಕಾರ ನೈಟ್ ಕರ್ಫ್ಯೂ ಹೇರಿತು ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.