ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ‘ಭಾಗ್ಯಲಕ್ಷ್ಮಿ’ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆಯ ‘ಸುಕನ್ಯಾ ಸಮೃದ್ಧಿ’ ಮೂಲಕ ಮುಂದುವರಿಸಲು ನಿನ್ನೆ ನಡೆದ ಸಂಪುಟ ಸಭೆ ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಇನ್ಮುಂದೆ ಭಾಗ್ಯಲಕ್ಷ್ಮಿ ಯೋಜನೆಗೆ ಎಲ್‌ಐಸಿ ಬದಲು ಅಂಚೆ ಇಲಾಖೆ ಏಜೆನ್ಸಿಯಾಗಿರುತ್ತದೆ. ಈ ಯೋಜನೆಯನ್ನು ಜಾರಿ ಮಾಡುವುದರಿಂದ ಫಲಾನುಭವಿಗಳಿಗೆ ಯಾವುದೇ ನಷ್ಟವಾಗುವುದಿಲ್ಲ. ರಾಜ್ಯ ಸರ್ಕಾರದ ಭರವಸೆಯಂತೆ ಹೆಣ್ಣು ಮಗುವಿಗೆ 18 ವರ್ಷ ತುಂಬಿದಾಗ ₹1 ಲಕ್ಷ ದೊರೆಯುತ್ತದೆ.
ಎಲ್ ಐಸಿ ಈ ಹಿಂದೆ ಒಪ್ಪಂದ ಮಾಡಿಕೊಂಡಂತೆ 18 ವರ್ಷ್ ತುಂಬಿದ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮಿ ಬಾಂಡ್ ನೀಡಲು ತಕರಾರು ಮಾಡುತ್ತಲೇ ಇತ್ತು. ಆದ್ದರಿಂದ ರಾಜ್ಯ ಸರ್ಕಾರವು ಸಂಪುಟ ಸಭೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ವರ್ಗಾಯಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಭಾಗ್ಯಲಕ್ಷ್ಮಿ ಯೋಜನೆಯನ್ನು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಹೆಣ್ಣುಮಗು ಜನಿಸಿದರೆ ಅವರಿಗೆ ಈ ಬಾಂಡ್ ನೀಡುವ ಯೋಜನೆಯಾಗಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಈ ಯಾಜನೆಯನ್ನು ಜಾರಿಗೆ ತಂದಿದ್ದರು.