Thawar Chand Gehlot: ಇತ್ತೀಚೆಗೆ ರಾಜ್ಯ ಸರ್ಕಾರದ 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ವಿಧೇಯಕಗಳನ್ನು ತಿರಸ್ಕರಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸದ್ಯ 11 ವಿಧೇಯಕಗಳ ಪೈಕಿ ಮಹತ್ವದ 3 ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ.
ಹೌದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇತ್ತೀಚೆಗೆ ರಾಜ್ಯ ಸರ್ಕಾರದ 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ವಿಧೇಯಕಗಳನ್ನು ತಿರಸ್ಕರಿಸಿದ್ದರು. ಆದರೆ ಸದ್ಯ 11 ವಿಧೇಯಕಗಳ ಪೈಕಿ 3 ವಿಧೇಯಕಗಳಾದ ಕರ್ನಾಟಕ ಸಾರ್ವಜನಿಕ ಪರೀಕ್ಷೆ ವಿಧೇಯಕ-2023, ರೇಣುಕಾ ಯಲ್ಲಮ್ಮದೇವಿ ದೇಗುಲ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಹಾಗೂ ಮುನ್ಸಿಪಾಲಿಟಿ & ಸಂಬಂಧಿತ ಇತರ ಕಾಯ್ದೆಗಳು ತಿದ್ದುಪಡಿ ವಿಧೇಯಕ-2024 ಈ 3 ವಿಧೇಯಕಗಳಿಗೆ ಅಂಕಿತ ಹಾಕಿದ್ದಾರೆ..
ರಾಜ್ಯ ಸರ್ಕಾರದ 11 ಮಸೂದೆಗಳ ಪೈಕಿ 8 ಮಸೂದೆಗಳು ಬಾಕಿ
- ರಾಜ್ಯಪಾಲರು ರಾಜ್ಯ ಸರ್ಕಾರದ ಬಾಕಿಯಾದ 8 ಮಸೂದೆಗಳ ಪೈಕಿ ಈ ಕೆಳಗಿನಂತಿದೆ.
- ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ,
- ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ,
- ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ,
- ಗದಗ ಬೆಟಗೇರಿ ವ್ಯಾಪರ, ಸಂಸ್ಕೃತಿ, ಪ್ರದರ್ಶನ ಪ್ರಾಧಿಕಾರ ವಿಧೇಯಕ,
- ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಗಳನ್ನು ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.