ರಾಜ್ಯ ಸರ್ಕಾರದ ಮಹತ್ವದ 3 ಮಸೂದೆಗಳಿಗೆ ರಾಜ್ಯಪಾಲರಿಂದ ಅಂಕಿತ; 8 ಮಸೂದೆಗಳು ಬಾಕಿ!

Thawar Chand Gehlot Thawar Chand Gehlot

Thawar Chand Gehlot: ಇತ್ತೀಚೆಗೆ ರಾಜ್ಯ ಸರ್ಕಾರದ 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ವಿಧೇಯಕಗಳನ್ನು ತಿರಸ್ಕರಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸದ್ಯ 11 ವಿಧೇಯಕಗಳ ಪೈಕಿ ಮಹತ್ವದ 3 ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ.

ಹೌದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇತ್ತೀಚೆಗೆ ರಾಜ್ಯ ಸರ್ಕಾರದ 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ವಿಧೇಯಕಗಳನ್ನು ತಿರಸ್ಕರಿಸಿದ್ದರು. ಆದರೆ ಸದ್ಯ 11 ವಿಧೇಯಕಗಳ ಪೈಕಿ 3 ವಿಧೇಯಕಗಳಾದ ಕರ್ನಾಟಕ ಸಾರ್ವಜನಿಕ ಪರೀಕ್ಷೆ ವಿಧೇಯಕ-2023, ರೇಣುಕಾ ಯಲ್ಲಮ್ಮದೇವಿ ದೇಗುಲ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಹಾಗೂ ಮುನ್ಸಿಪಾಲಿಟಿ & ಸಂಬಂಧಿತ ಇತರ ಕಾಯ್ದೆಗಳು ತಿದ್ದುಪಡಿ ವಿಧೇಯಕ-2024 ಈ 3 ವಿಧೇಯಕಗಳಿಗೆ ಅಂಕಿತ ಹಾಕಿದ್ದಾರೆ..

ರಾಜ್ಯ ಸರ್ಕಾರದ 11 ಮಸೂದೆಗಳ ಪೈಕಿ 8 ಮಸೂದೆಗಳು ಬಾಕಿ

  • ರಾಜ್ಯಪಾಲರು ರಾಜ್ಯ ಸರ್ಕಾರದ ಬಾಕಿಯಾದ 8 ಮಸೂದೆಗಳ ಪೈಕಿ ಈ ಕೆಳಗಿನಂತಿದೆ.
  • ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ,
  • ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ,
  • ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ,
  • ಗದಗ ಬೆಟಗೇರಿ ವ್ಯಾಪರ, ಸಂಸ್ಕೃತಿ, ಪ್ರದರ್ಶನ ಪ್ರಾಧಿಕಾರ ವಿಧೇಯಕ,
  • ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ ಗಳನ್ನು ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ.
Advertisement
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು