ಸರ್ಕಾರಿ ನೌಕರರು 2ನೇ ವಿವಾಹವಾಗಬೇಕಾದ್ರೆ ತಮ್ಮ ಇಲಾಖೆ ಗಮನಕ್ಕೆ ತಂದು ಅಗತ್ಯ ಅನುಮತಿ ಪಡೆಯಬೇಕು ಎಂದು ಬಿಹಾರ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಹೌದು, ಬಿಹಾರ ರಾಜ್ಯ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ವೈವಾಹಿಕ ಸ್ಥಿತಿಯ ಬಗ್ಗೆ ತಿಳಿಸಲು ಮತ್ತು ಅಗತ್ಯ ಅನುಮತಿಯನ್ನು ಪಡೆದ ನಂತರವೇ ಎರಡನೇ ವಿವಾಹಕ್ಕೆ ಅರ್ಹರಾಗಬೇಕೆಂದು ನಿರ್ದೇಶಿಸಿದೆ. ಈ ವೇಳೆ ಮೊದಲ ಪತ್ನಿ-ಪತಿ ನಿರಾಕರಿಸಿದರೆ ಎರಡನೇ ಪತ್ನಿ ಅಥವಾ ಪತಿ ಸರ್ಕಾರಿ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಸರ್ಕಾರಿ ನೌಕರನು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಎರಡನೇ ಮದುವೆಯಾಗಿ ಸೇವಾ ಅವಧಿಯಲ್ಲಿ ಮರಣಹೊಂದಿದರೆ, ಅವನ ಅಥವಾ ಅವಳ ಎರಡನೇ ಹೆಂಡತಿ / ಪತಿ ಮತ್ತು ಅವರ ಮಕ್ಕಳು ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಬಿಹಾರ ರಾಜ್ಯ ಸರ್ಕಾರ ತಿಳಿಸಿದೆ.