ಬೆಂಗಳೂರು: ಕೊರೊನಾ ಕಾರಣದಿಂದಾಗಿ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದ ಸಿಪಿ, ತಾಲೂಕ ಪಂಚಾಯತ್ ಮತ್ತು ಜಿಲ್ಲಾ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್, ಉಪ ಮೇಯರ್ ಹಾಗೂ ಪದಾಧಿಕಾರಿಗಳ ಚುನಾವಣೆಗೆ ಬ್ರೇಕ್ ಹಾಕಲಾಗಿತ್ತು. ಆದರೆ, ಈಗ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡ ಕಾರಣ, ಇಂತಹ ಚುನಾವಣೆಗೆ ಇದೀಗ ರಾಜ್ಯ ಸರ್ಕಾರ ಮತ್ತೆ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಮಾಹಿತಿ ನೀಡಿದ್ದು, ದಿನಾಂಕ 20-09-2021ರಂದು ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ರಾಜ್ಯದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ( CP, TP and ZP ) ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್, ಉಪ ಮೇಯರ್ ಹಾಗೂ ಪದಾಧಿಕಾರಿಗಳ ಚುನಾವಣೆಗಳನ್ನು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ನಡೆಸಲು ಸಚಿವ ಸಂಪುಟ ನಿರ್ಧರಿಸಿದ್ದು, ಚುನಾವಣೆ ದಿನಾಂಕ ಮಾತ್ರ ನಿಗದಿಯಾಗಬೇಕಿದೆ.