Gruhalakshmi registration: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆಶಾದಾಯವಾಗಿದೆ. ಬೆಂಗಳೂರಿನಲ್ಲಿ ಸತತ ಸಭೆ ನಡೆಸುವುದರ ಮೂಲಕ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಕೊನೆಗೂ ಮುಖ್ಯಮಂತ್ರಿ ನೇತೃತ್ವದ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆ (Gruha Lakshmi scheme) , ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ ಯೋಜನೆ ಸೇರಿ ಐದು ಗ್ಯಾರಿಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಬಡ, ಮಧ್ಯಮ ವರ್ಗದ ಜನರಿಗೆ ಹೊಸ ಶಕ್ತಿ ನೀಡಿದಂತಾಗಿದೆ.
ಗೃಹಲಕ್ಷ್ಮಿ ಯೋಜನೆ ಅಂದರೆ ಏನು, ಅದರಿಂದ ಯಾರಿಗೆ ಲಾಭ? -What is Gruha Lakshmi scheme
ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಿದ್ದು, ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ. ಪ್ರತಿ ತಿಂಗಳು ಪ್ರತಿ ಮನೆಯ ಒಡತಿಗೆ 2000 ಸಾವಿರ ರೂಪಾಯಿ ಗೃಹಲಕ್ಷ್ಮಿ ಯೋಜನೆಯ (Gruha Lakshmi scheme) ಸೌಲಭ್ಯ ಸಿಗಲಿದೆ. ಇದರಿಂದ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದ ಕುಟುಂಬಗಳಿಗೆ ಹೆಚ್ಚು ಅನುಕೂಲವಾಗಿದ್ದು, ಬಡವರ ಬದುಕಿನಲ್ಲಿ ಒಂದಷ್ಟು ಸುಧಾರಣೆ ಕಾಣಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯುವುದು ಹೇಗೆ?- How To Get Gruha Lakshmi scheme
ಕನಾರ್ಟರ ರಾಜ್ಯದಲ್ಲಿರುವ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವ ಯಜಮಾನಿಯ (ಮನೆಯ ಒಡತಿ) ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಮೊತ್ತ ವರ್ಗಾವಣೆ ಮಾಡಲಾಗುತ್ತದೆ. ಈ ಗೃಹಲಕ್ಷ್ಮೀ ಯೋಜನೆ ಸೌಲಭ್ಯ (Gruha Lakshmi scheme) ಪಡೆಯಲು ಮಹಿಳೆಯರು ಮೊದಲು ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಪ್ರತಿ ಕುಟುಂಬದ ಮನೆಯ ಯಜಮಾನಿಯ (ಒಡತಿಂiÀ) ಅಗತ್ಯ ದಾಖಲೆಗಳನ್ನು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು. ಮನೆಯ ಒಡತಿಯ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಫೋಟೋ (ಭಾವಚಿತ್ರ) ಸೇರಿದಂತೆ ಅಗತ್ಯ ದಾಖಲೆ ಒದಗಿಸಬೇಕು.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ?- Gruha Lakshmi scheme Appliction Date
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈಗಾಗಲೇ ಘೋಷಣೆ ಮಾಡಿರುವಂತೆ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಲು ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಒಂದು ತಿಂಗಳ ಒಳಗೆ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯಲು ಅಗತ್ಯ ದಾಖಲೆ ಸಲ್ಲಿಸಬೇಕು. ಜುಲೈ 15 ರಿಂದ ಆಗಸ್ಟ್ 15ರ ವರೆಗೆ
ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ತಂತ್ರಾಂಶ ಅಭಿವೃದ್ಧಿಪಡಿಸಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದೆ.
ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಮುಖ ಅಂಶಗಳು-How To apply online Application Gruha Lakshmi scheme
ಗೃಹಲಕ್ಷ್ಮೀ ಯೋಜನೆಯ ಮೊತ್ತ | ಪ್ರತಿ ತಿಂಗಳು 2000 ರೂಪಾಯಿ |
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸುವ ದಿನಾಂಕ | – ಜೂನ್ 15ರಿಂದ |
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ | – ಜುಲೈ 15 |
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು | -ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಫೋಟೋ (ಭಾವಚಿತ್ರ). |
ನೂತನ ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆ (Gruha Lakshmi scheme) ಸೇರಿದಂತೆ ಐದು ಯೋಜನೆಗಳ ಕುರಿತು ಹಲವು ಟೀಕೆಗಳೂ ಬಂದರೂ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಂತಸ ಮೂಡಿಸಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯ ಆರ್ಥಿಕ ಸಬಲೀಕರಣಕ್ಕೆ ಅನುಕೂಲವಾಗಲಿದೆ ಎಂದು ಹಲವು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಅನ್ನಭಾಗ್ಯ, ಯುವನಿಧಿ, ಶಕ್ತಿ ಯೋಜನೆ ಯೋಗಳ ಸಂಪೂರ್ಣ ಮಾಹಿತಿಯನ್ನು ವಿಜಯಪ್ರಭ.ಕಾಂ ನಲ್ಲಿ ಪಡೆಯಿರಿ.
[table id=2 /]
English Summary: Gruha Lakshmi Scheme Karnataka Registration, Apply Online, log in, Status and many other related details can be checked from this Post. Find Out More about gruhalakshmi scheme registration.