ದೀಪಾವಳಿ ವೇಳೆಗೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ; ಈ ಪಟ್ಟಿಯಲ್ಲಿ ಹೆಸರು ಇದ್ರೆ ಮಾತ್ರ ಗೃಹಲಕ್ಷ್ಮಿ ಹಣ ಜಮಾ

Gruhalakshmi scheme | ದೀಪಾವಳಿ ಹಬ್ಬದ ವೇಳೆಗೆ ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿ ಇರುವ ಎರಡು ಕಂತುಗಳ ₹4,000 ಹಣ ಒಟ್ಟಿಗೆ ಜಮೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹೌದು, ಈ ಹಣವು ದೀಪಾವಳಿಯ ಒಂದು…

Gruhalakshmi scheme

Gruhalakshmi scheme | ದೀಪಾವಳಿ ಹಬ್ಬದ ವೇಳೆಗೆ ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿ ಇರುವ ಎರಡು ಕಂತುಗಳ ₹4,000 ಹಣ ಒಟ್ಟಿಗೆ ಜಮೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹೌದು, ಈ ಹಣವು ದೀಪಾವಳಿಯ ಒಂದು ವಾರದೊಳಗೆ, ಅಂದರೆ 7 ರಿಂದ 10 ದಿನಗಳ ಒಳಗೆ, ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎನ್ನಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅನುಕೂಲವಾಗಲಿದ್ದು, ದೀಪಾವಳಿಯ ಸಂಭ್ರಮ ಇನ್ನಷ್ಟು ಹೆಚ್ಚಲಿದೆ. ಶೀಘ್ರದಲ್ಲೆ ಈ ಕುರಿತು ಅಧಿಕೃತ ಮಾಹಿತಿ ಹೊರಬೀಳಲಿದೆ.

ಈ ಪಟ್ಟಿಯಲ್ಲಿ ಹೆಸರು ಇದ್ರೆ ಮಾತ್ರ ಗೃಹಲಕ್ಷ್ಮಿ ಹಣ ಜಮಾ

ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯಡಿ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.

Vijayaprabha Mobile App free

ಹಣ ಪಡೆಯಲು ಆಧಾರ್ ಕಾರ್ಡ್‌ಗೆ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು, ಒಂದೇ ಕುಟುಂಬದಲ್ಲಿ ಎರಡು ರೇಷನ್ ಕಾರ್ಡ್‌ಗಳಿರಬಾರದು, ಮತ್ತು ಯಾರೂ ಆದಾಯ ತೆರಿಗೆದಾರರಾಗಿರಬಾರದು. ಫಲಾನುಭವಿಗಳ ಪಟ್ಟಿಯನ್ನು https://ahara.kar.nic.in/Home/EServices ವೆಬ್‌ಸೈಟ್‌ನಲ್ಲಿ ಜಿಲ್ಲೆ, ತಾಲೂಕು, ಗ್ರಾಮವಾರು ಪರಿಶೀಲಿಸಬಹುದು. ಪಟ್ಟಿಯಲ್ಲಿ ಹೆಸರಿಲ್ಲದವರು ತಪ್ಪುಗಳನ್ನು ಸರಿಪಡಿಸಿ ಮರು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.