ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, “ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ…

hd kumaraswamy vijayaprabha

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗು
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, “ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ.

ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನತೆ ಇನ್ನೂ ಮರೆತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್ಗೆ ಪಾಠ ಕಲಿಸಲಿದ್ದಾರೆ.

ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ ‘ಕೈ’ವಾಡ ಕೂಡ ಕಾರಣ.

Vijayaprabha Mobile App free

ಕಾಂಗ್ರೆಸ್ ಪಕ್ಷದ ಹತ್ತಾರು ಮಂದಿ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ’ ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು.

ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದ ಜಾಣ ಪೆದ್ದ ನಾಗಿದ್ದು ವಿಪರ್ಯಾಸ” ಎಂದು ಟ್ವೀಟ್ ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.