Holiday : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಕೇಂದ್ರ ಸರ್ಕಾರ ಇಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ (Holiday) ಘೋಷಿಸಲಾಗಿದೆ.
ಹೌದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಇಂದು ಬೆಳಗ್ಗೆ 11:45ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ನಿನ್ನೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಕೇಂದ್ರ ಸರ್ಕಾರದ ಎಲ್ಲಾ ಕಚೇರಿಗಳು ಮತ್ತು ಕೇಂದ್ರ ಸರ್ಕಾರಿ ವಲಯದ ಸಂಸ್ಥೆಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.
ಇದನ್ನೂ ಓದಿ: ದೆಹಲಿಯ ರಾಜ್’ಘಾಟ್ ಬಳಿ ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.‘ಮನಮೋಹನ್ ಸಿಂಗ್’ ಅಂತ್ಯಸಂಸ್ಕಾರ
7 ದಿನಗಳ ಶೋಕಾಚರಣೆ
ಇನ್ನು, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ದೇಶದಲ್ಲಿ 7 ದಿನಗಳ ಶೋಕಾಚರಣೆಯನ್ನು ಆಚರಿಸಲಿದ್ದು, ಶೋಕಾಚರಣೆಯು ಜ. 1, 2025 ರವರೆಗೆ ಇರುತ್ತದೆ.ಕಾಂಗ್ರೆಸ್ ಪಕ್ಷವು ಮುಂದಿನ 7 ದಿನಗಳ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಆದೇಶವನ್ನು ನೀಡಲಾಗಿತ್ತು.