ಹರಪನಹಳ್ಳಿ: ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆ ರಚನೆಗೆ ಇಂದಿನ ಸಂಪುಟ ಸಭೆಯಲ್ಲಿ ಅನೌಪಚಾರಿಕ ಅಸ್ತು ನೀಡಿದ್ದು, ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಜಿ.ಕರುಣಾಕರ ರೆಡ್ಡಿ ಹರಪನಹಳ್ಳಿ ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.
ಸಚಿವ ಆನಂದ್ ಸಿಂಗ್ ಅವರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೆ ವಿಜಯನಗರ ಜಿಲ್ಲೆ ರಚನೆಗೆ ಅಸ್ತು ನೀಡಿದೆ. ಶಾಸಕ ಸೋಮಶೇಖರ ರೆಡ್ಡಿ, ಜಿ.ಕರುಣಾಕರೆಡ್ಡಿ ಸೇರಿದಂತೆ ಇತರರು ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಜಿ.ಕರುಣಾಕರ ರೆಡ್ಡಿ ಅವರು ಹರಪನಹಳ್ಳಿ ಕ್ಷೇತ್ರವನ್ನು ಸರ್ಕಾರ ಜಿಲ್ಲೆಯಾಗಿ ಘೋಷಣೆ ಮಾಡಬೇಕು. ಭೌಗೋಳಿಕವಾಗಿ ಜಿಲ್ಲೆಯಯಾಗಲು ಹರಪನಹಳ್ಳಿ ಕ್ಷೇತ್ರ ಸೂಕ್ತವಾಗಿದ್ದು, ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.