ದಾವಣಗೆರೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ, 15,000 ದಂಡ

ದಾವಣಗೆರೆ ಫೆ.07 :ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಅಪರಾಧಕ್ಕೆ ಸಂಬಂಧಿಸಿದಂತೆ ದಾವಣಗೆರೆಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 15…

court judgement vijayaprabha news

ದಾವಣಗೆರೆ ಫೆ.07 :ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಅಪರಾಧಕ್ಕೆ ಸಂಬಂಧಿಸಿದಂತೆ ದಾವಣಗೆರೆಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡವನ್ನು ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ವಿಶೇಷ ನ್ಯಾಯಾಧೀಶರಾದ ಶ್ರೀಪಾದ್ ಎನ್ ಅವರು ತೀರ್ಪು ನೀಡಿದ್ದಾರೆ.

ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ದೇವಿದುರ್ಗಾ ವ್ಯಕ್ತಿಯೊಬ್ಬರು ಮಗಳ ಮೇಲೆ ಆಗಿರುವ ಲೈಂಗಿಕ ಅತ್ಯಾಚಾರದ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ತನಿಖಾಧಿಕಾರಿಯಾಗಿದ್ದ ಗಜೇಂದ್ರಪ್ಪ ಕೆ.ಎಸ್. ಅವರು ತನಿಖೆ ಕೈಗೊಂಡು, ಆರೋಪಿ ವಿರುದ್ಧ ಅಪರಾಧಕ್ಕೆ ಸಂಬಂಧಿಸಿದಂತೆ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ವಿಶೇಷ ನ್ಯಾಯಾಧೀಶರಾದ ಶ್ರೀಪಾದ್ ಎನ್. ಇವರು ದೋಷಾರೋಪಣಾ ಪಟ್ಟಿಯ ಅನುಸಾರ ಸಂಪೂರ್ಣ ವಿಚಾರಣೆ ನಡೆಸಿ, ಆರೋಪವು ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ 20 ವರ್ಷಗಳ ಶಿಕ್ಷೆ ಮತ್ತು ರೂ. 15,000 ದಂಡ ವಿಧಿಸಿದ್ದಾರೆ. ದಂಡವನ್ನು ಪಾವತಿಸದೇ ಇದ್ದ ಪಕ್ಷದಲ್ಲಿ ಒಂದು ವರ್ಷಗಳ ಅವಧಿಗೆ ಆರೋಪಿಯನ್ನು ಕಾರಾಗೃಹ ವಾಸ ಅನುಭವಿಸುವಂತೆ ಆದೇಶ ನೀಡಿರುತ್ತಾರೆ. ಸಂತ್ರಸ್ಥೆಗೆ ಪರಿಹಾರ ರೂಪದಲ್ಲಿ ರೂ.5,50,000 ಪರಿಹಾರ ನೀಡುವ ಸಲುವಾಗಿ ಜಿಲ್ಲಾ ಉಚಿತ ಸೇವಾ ಪ್ರಾಧಿಕಾರಕ್ಕೆ ನೀಡುವಂತೆ ಆದೇಶಿಸಿದ್ದಾರೆ.

Vijayaprabha Mobile App free

ಸರ್ಕಾರದ ಪರವಾಗಿ ಹಿಂದೆ ಅಭಿಯೋಜಕರಾಗಿದ್ದ ಶೌಕತ್ ಅಲಿ ಹಾಗೂ ಪ್ರಸ್ತುತ ವಿಶೇಷ ಸರ್ಕಾರಿ ಅಭಿಯೋಜಕರಾಗಿರುವ ರೇಖಾ ಎಸ್. ಕೋಟೆಗೌಡರ್ ಅವರು ಪೋಕ್ಸೋ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.