ಬಳ್ಳಾರಿ: ಕೊರೋನಾ ಸೋಂಕು ಪ್ರಕರಣ ಅಧಿಕವಾಗಿರುವ ಹಿನ್ನೆಲೆ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಇಂದು ಜೂನ್ 14ರವರೆಗೆ ಜಿಲ್ಲಾದ್ಯಂತ ಕಠಿಣ ಲಾಕ್ ಡೌನ್ ಹೇರಿ ಆದೇಶ ಹೊರಡಿಸಿದ್ದಾರೆ.
ಇನ್ನು,ಜೂನ್ 14ರವರೆಗೆ ಜಿಲ್ಲಾದ್ಯಂತ ಕಠಿಣ ಲಾಕ್ ಡೌನ್ ಹಿನ್ನಲೆ, ನಾಳೆ ಮತ್ತು ನಾಡಿದ್ದು ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರವೇ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರಲಿದೆ.
ಇನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಬ್ಯಾಂಕ್ ಗಳು ತೆರೆದಿರಲಿದ್ದು, ಉಳಿದಂತೆ ಎಲ್ಲವೂ ಬಂದ್ ಇರಲಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಸ್ಪಷ್ಟಪಡಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.