ಹರಿಹರ: ಕೊರೊನಾ ಭಯದಿಂದ 30 ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ.
ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ನಿವಾಸಿ ಬಸವರಾಜ್ ಆತ್ಮಹತ್ಯೆಗೆ ಶರಣಾದ ಯುವಕ. ಈತ ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ. ಈ ಕಾರಣ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಬುಧವಾರ ಪಾಸಿಟಿವ್ ವರದಿ ಬಂದಿದೆ. ಇದರಿಂದಾಗಿ ಹೆದರಿದ ಯುವಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಲೇಬೆನ್ನೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.