ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಮಾಸಿಕ ಕನಿಷ್ಠ 15 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಬೇಕು ಎಂದು ಎಚ್ ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, “ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸುತ್ತೇನೆ. ಸರ್ಕಾರ ಭರವಸೆ ನೀಡಿದ್ದಂತೆ ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್ಡೌನ್ ಸಂದರ್ಭದಲ್ಲಿ ತಡೆಹಿಡಿದಿದ್ದ ಗೌರವ ಧನದ ಬಾಕಿಯನ್ನು ತಕ್ಷಣವೇ ನೀಡಬೇಕು.
ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ 15 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದ 14 ವಿಧಾನಪರಿಷತ್ ಸದಸ್ಯರುಗಳಿಗೆ ನೀಡಿದ್ದ ಭರವಸೆಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕು.
ಸುಮಾರು ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿ ಸರ್ಕಾರ 15000 ರೂ.ಗಳ ಮಾಸಿಕ ಗೌರವಧನ ನೀಡುವ ಭರವಸೆಯನ್ನು ಕೂಡಲೇ ಜಾರಿ ಮಾಡಬೇಕು.
ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಸರ್ಕಾರ ಭರವಸೆ ನೀಡಿದ್ದಂತೆ ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್ಡೌನ್ ಸಂದರ್ಭದಲ್ಲಿ ತಡೆಹಿಡಿದಿದ್ದ ಗೌರವ ಧನದ ಬಾಕಿಯನ್ನು ತಕ್ಷಣವೇ ನೀಡಬೇಕು.
1/4— H D Kumaraswamy (@hd_kumaraswamy) October 11, 2020