ಗಣಿ ಗುತ್ತಿಗೆ ಅಕ್ರಮ: ಎಚ್‌ಡಿಕೆ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ರಾಜ್ಯಪಾಲರಿಗೆ SIT ಪತ್ರ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ, ಮಾಜಿ ಸಿಎಂ ಎಚ್ ಡಿ​ ಕುಮಾರಸ್ವಾಮಿ ಅವರಿಗೆ…

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಸಚಿವ, ಮಾಜಿ ಸಿಎಂ ಎಚ್ ಡಿ​ ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಹೌದು. ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ (ಎಸ್‌ಎಸ್‌ವಿಎಂ) ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ರಾಜ್ಯಪಾಲರಿಗೆ ಸೋಮವಾರ ಮತ್ತೆ ಪ್ರಸ್ತಾವ ಸಲ್ಲಿಸಿದೆ.

ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್‌ಎಸ್‌ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್‌ ಸಂತೋಷ್‌ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿಯಲ್ಲಿನ ಉಲ್ಲೇಖ ಆಧರಿಸಿ ಲೋಕಾಯುಕ್ತದ ಎಸ್‌ಐಟಿ ತನಿಖೆ ನಡೆಸುತ್ತಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ 2023ರ ನವೆಂಬರ್‌ 21ರಂದು ಪ್ರಸ್ತಾವ ಸಲ್ಲಿಸಿದ್ದ ಲೋಕಾಯುಕ್ತದ ಎಸ್‌ಐಟಿ ಮುಖ್ಯಸ್ಥರಾಗಿರುವ ಐಜಿಪಿ ಎಂ. ಚಂದ್ರಶೇಖರ್‌, ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಕೋರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.