ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳಲ್ಲಿ ಎಚ್ ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು : ಡಿಸೆಂಬರ್ 16 ರಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜನ್ಮದಿನವಾಗಿದ್ದು, ಕರೋನ ಹಿನ್ನಲೆ ತಮ್ಮ ಹುಟ್ಟುಹಬ್ಬವನ್ನು ಆಚರಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಕುರಿತು ಸ್ವತಃ ಎಚ್ ಡಿ ಕುಮಾರಸ್ವಾಮಿ ಅವರು…

hd kumaraswamy vijayaprabha

ಬೆಂಗಳೂರು : ಡಿಸೆಂಬರ್ 16 ರಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಜನ್ಮದಿನವಾಗಿದ್ದು, ಕರೋನ ಹಿನ್ನಲೆ ತಮ್ಮ ಹುಟ್ಟುಹಬ್ಬವನ್ನು ಆಚರಸಿಕೊಳ್ಳಲು ನಿರ್ಧರಿಸಿದ್ದಾರೆ.

ಈ ಕುರಿತು ಸ್ವತಃ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಡಿ.16 ನನ್ನ‌ ಜನ್ಮದಿನವಾಗಿದ್ದು, ಕೊರೋನಾ ಸೋಂಕು ಜನರನ್ನು ಬಾಧಿಸುತ್ತಿರುವ ಈ ಸಮಯದಲ್ಲಿ ನನ್ನ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಇರುವುದಿಲ್ಲ ಎಂದು ಹೇಳಿದ್ದು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹಾಗು ಹಿತೈಷಿಗಳು ನೀವು ಇರುವಲ್ಲೆ ನನ್ನನ್ನು ಹಾರೈಸಿ, ನಿಮ್ಮ ಪ್ರೀತಿ ಅಭಿಮಾನ ದೊಡ್ಡದು ಎಂದು ಮನವಿ ಮಾಡಿದ್ದಾರೆ.

ಪ್ರತಿ ಹುಟ್ಟುಹಬ್ಬಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ನಾವು ಬದುಕಿರುವಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.