ನೊಂದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ…

hd kumaraswamy vijayaprabha

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ರಾಜ್ಯದ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ಸರ್ಕಾರ ತಕ್ಷಣ ವಿಶೇಷ ಅನುದಾನ ಘೋಷಣೆ ಮಾಡಬೇಕು. ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು.

ಸತತ ಎರಡು ವರ್ಷಗಳಿಂದ ನೆರೆಯಿಂದ ತತ್ತರಿಸಿರುವ ರಾಜ್ಯದ ರೈತರು ಈ ಬಾರಿ ಮತ್ತೆ ಮಳೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ, ಮನೆ-ಮಠ ಕಳೆದುಕೊಂಡು ನೆರೆಯಿಂದ ನೊಂದ ರಾಜ್ಯದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸುವ ಮೂಲಕ ವಿಶ್ವಾಸ ತುಂಬುವ ಕೆಲಸವನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಬೇಕು.

ಕೋರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟುಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.