ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಅವರ ರಾಸಲೀಲೆಯ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ನನಗಿರುವ ಮಾಹಿತಿ ಪ್ರಕಾರ, ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದ್ದು, ಕಳೆದ 3 ತಿಂಗಳಿನಿಂದ ಈ ವ್ಯವಹಾರ ನಡೆದಿತ್ತು. ಈ ರಾಸಲೀಲೆ ಪ್ರಕರಣದಲ್ಲಿ ದೊಡ್ಡ ದೊಡ್ಡ ನಾಯಕರಿದ್ದು, ಈ ಪ್ರಕರಣದ ತನಿಖೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ, ನಾನು ಒಂದು ಕಲ್ಲು ಹೊಡೆಯಬೇಕು ಎಂದು ಹೊಡೆಯಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.