ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ; ವಿದ್ಯುತ್ ದರ ಹೆಚ್ಚಳಕ್ಕೆ HDK ಕಿಡಿ

ಬೆಂಗಳೂರು: ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ ಎಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ…

hd kumaraswamy vijayaprabha

ಬೆಂಗಳೂರು: ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ ಎಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು?

Vijayaprabha Mobile App free

ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ?

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ.

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು & ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ?

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.