ದಾವಣಗೆರೆ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಲಾಗಿದ್ದು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್.ಡಿ.ಕುಮಾರಸ್ವಾಮಿ ಅವರು, ಕೇಂದ್ರದ ಬಜೆಟ್ ರಾಜ್ಯದಲ್ಲಿ ಮುಂದೆ ಬರುವ ಸರ್ಕಾರದ ತೀರ್ಮಾನ ಮಾಡುತ್ತದೆ. ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದ್ದು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ ಆಗಿದೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ತಿಂಗಳು ಇದೆ. ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲಾ ಯೋಜನೆಗಳು ಜಾರಿ ಆಗಬೇಕಲ್ಲ. ಭದ್ರಾ, ಮಹಾದಾಯಿ, ಕೃಷ್ಣ ಏನೇ ಮಾಡಿದ್ರೂ ಮೊದಲೇ ಮಾಡಬೇಕಿತ್ತು ಎಂದು ವ್ಯಂಗ್ಯವಾಡಿದರು.