ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕುಟುಂಬಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಲಿದ್ದಾರೆ.
ಹೌದು, ಇಂದು ಬೆಳಗ್ಗೆ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಡಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ 7.15ಕ್ಕೆ ಮಂಗಳೂರು ತಲುಪಲಿದ್ದಾರೆ ಎನ್ನಲಾಗಿದೆ.
ತರುವಾಯ ಪುತ್ತೂರು ತಾಲೂಕಿನ ನೆಟ್ಟಾರು ಗ್ರಾಮಕ್ಕೆ ತೆರಳಲಿರುವ ಕುಮಾರಸ್ವಾಮಿ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಾಂತ್ವನ ಹೇಳಲಿದ್ದು, ನಂತರ ಮಂಗಳೂರಿನ ಸುರತ್ಕಲ್ ನಲ್ಲಿ ಹತ್ಯೆಗೀಡಾದ ಮುಸ್ಲಿಂ ಯುವಕ ಫಾಜಿಲ್ ಪೋಷಕರನ್ನೂ ಕೂಡ ಸಂತೈಸಲಿದ್ದಾರೆ ಎನ್ನಲಾಗಿದೆ.