Heavy rain : ರಾಜ್ಯದ ಕರಾವಳಿ, ಮಲೆನಾಡಿನ ಕೆಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಹೌದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ (yellow alert) ಘೋಷಿಸಿದ್ದು, ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು-ಸಿಡಿಲಿನ ಜೊತೆಗೆ ಭಾರೀ ಮಳೆ (Heavy rain) ಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು, ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.