Heavy rain : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೌದು, ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡದಲ್ಲಿ ಮತ್ತೆ ಮಳೆ ಬಿರುಸುಗೊಂಡಿದ್ದರಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಆಳ ಸಮುದ್ರ ಮೀನುಗಾರಿಕೆ ಮತ್ತೆ ಸ್ಥಗಿತಗೊಂಡಿದೆ.
ಇನ್ನು, ನಿನ್ನೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ಭರ್ಜರಿ ಮಳೆಯಗಿದ್ದು, ಕೆಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ.
ಇದನ್ನೂ ಓದಿ: ಈರುಳ್ಳಿ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್; ಕೆಜಿಗೆ ₹70 ಇದ್ದ ಈರುಳ್ಳಿ ಬೆಲೆ ಕೇವಲ ₹35ಕ್ಕೆ ಮಾರಾಟ!