Heavy rain : ಗದಗ, ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅವಾಂತರಗಳು ಸಂಭವಿಸಿವೆ. ಲಕ್ಷ್ಮೇಶ್ವರ ತಾ. ಕುಂದ್ರಳ್ಳಿಯಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದಾಗಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ದವಸ ಧಾನ್ಯಗಳಿಗೆ ಅಪಾರ ಹಾನಿ ಸಂಭವಿಸಿದೆ. ರಾತ್ರಿಯಿಡೀ ನಿದ್ದೆಯಿಲ್ಲದೆ ಜನರು ಹರಸಾಹಸಪಟ್ಟು ನೀರನ್ನು ಹೊರಹಾಕಿದ್ದಾರೆ. ಅತ್ತ ಬಾಗಲಕೋಟೆಯಲ್ಲೂ ಮಳೆ ವ್ಯಾಪಕ ಹಾನಿಯನ್ನುಂಟುಮಾಡಿದೆ. ನೀರಲಕೇರಿ ಗ್ರಾಮದಲ್ಲಿ ಅಪಾರ ಪ್ರಮಾಣದ ಬೆಳೆ ಕೊಚ್ಚಿಹೋಗಿದೆ.
ಮಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ
ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಇದೀಗ ಹುಬ್ಬಳ್ಳಿಯಲ್ಲಿ ಹೊಲದಿಂದ ಮನೆಗೆ ತೆರಳುವಾಗ ಭಾರೀ ಮಳೆಯಿಂದಾಗಿ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಬೆಳಗಲಿ ಕ್ರಾಸ್ ರಸ್ತೆ ಪಕ್ಕದಲ್ಲಿರುವ ಚರಂಡಿಯಲ್ಲಿ ಹುಸೇನ್ ಎಂಬುವವರು ಕೊಚ್ಚಿ ಹೋಗಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಹುಸೇನ್‌ಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.