Heavy rain falls: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಇನ್ನು ಮುಂದಿನ ಕೆಲ ದಿನಗಳವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಹೌದು, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭರ್ಜರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ: ನಮ್ಮ ಬಾಡಿ ಫ್ಯಾಕ್ಟ್ ಬಗ್ಗೆ ತಿಳಿಯದ ಕುತೂಹಲಕಾರಿ ಸಂಗತಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು, ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರೇ ಈ ಕೆಲಸ ಮಾಡಲು ಇಂದೇ ಕೊನೆ ದಿನ!