Heavy rain : ರಾಜ್ಯದ ವಿವಿಧೆಡೆ ಮತ್ತೆ ಮುಂಗಾರು ಚುರುಕುಗೊಂಡಿದ್ದು, 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಹೌದು, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗೆ ಇಂದು ʻಯೆಲ್ಲೋʼ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲ ಕಡೆಗಳಲ್ಲಿ ಆಗಾಗ ಮಳೆಯಾಗುವ ಸಾಧ್ಯತೆ ಎಂದು ಐಎಂಡಿ ಹೇಳಿದೆ.
ಇದನ್ನೂ ಓದಿ: ಇಂದು ವಜ್ರ ಯೋಗದಂದು ಮೇಷ, ತುಲಾ ರಾಶಿಯವರಿಗೆ ದಿಢೀರ್ ಲಾಭ..!?
ಇನ್ನು, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




