heavy rain: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ & ಕೊಡಗಿನಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಹೌದು, ಈ ವೇಳೆ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 6ರಿಂದ 11 ಸೆಂಟಿ ಮೀಟರ್ ನಷ್ಟು ಮಳೆಯಾಗಲಿದೆ ಎನ್ನಲಾಗಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ತುಂತುರು ಮಳೆಯಾಗುವ ಲಕ್ಷಣವಿದೆ ಎಂದಿದೆ.
ಇದನ್ನೂ ಓದಿ: ಭಾದ್ರಪದ ಮಾಸದ ಮೊದಲ ದಿನದಂದು ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ಅನುಗ್ರಹ..!
heavy rain: ರಾಜ್ಯದ ಇಂದಿನ ಹವಾಮಾನ ವರದಿ
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಸಹ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇಂದು ಮಳೆಯಾಗಲಿದೆ.
ಇನ್ನು, ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಶಿವಮೊಗ್ಗ, ಮಡಿಕೇರಿ ಸೇರಿದಂತೆ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮಳೆ ಸುರಿಯಲಿದ್ದು, ಸಂಜೆ ವೇಳೆಗೆ ಗುಡುಗು-ಸಿಡಿಲು ಸಹಿತ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಪಾಕ್ ಗೆ ಶಾಕ್, ಕೊನೆಯ ಎಸತದಲ್ಲಿ ಲಂಕಾಗೆ ರೋಚಕ ಜಯ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |