Heavy rain: ರಾಜ್ಯದ ವಿವಿಧೆಡೆ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ಮೂರು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಹೌದು, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿತ್ರದುರ್ಗ & ಕೋಲಾರ ಸೇರಿದಂತೆ ಈ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ‘ಯೆಲ್ಲೋ’ ಅಲರ್ಟ್ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ: ಇವರ ಮದುವೆಯ ಪ್ರಯತ್ನಗಳಿಗೆ ಫಲ ಸಿಗಲಿದೆ ; 12 ರಾಶಿಗಳ ಸೋಮವಾರದ ದಿನಭವಿಷ್ಯ
ಇನ್ನು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.