Heavy rain forecast | ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿಯೊಂದಿಗೆ ಇಂದಿನಿಂದ ನವೆಂಬರ್ 12 ವರೆಗೆ ಮತ್ತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಭಾರೀ ಮಳೆ ಪರಿಣಾಮ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




