Heavy rain holiday schools:ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಶಾಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ರಜೆ ಘೋಷಿಸಲಾಗಿದೆ.
ಹೌದು, ಅಂಗನವಾಡಿ, ಎಲ್‌ಕೆಜಿ, ಯುಕೆಜಿ, ಸರ್ಕಾರಿ, ಖಾಸಗಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ಒಂದು ದಿನ ರಜೆ ಘೋಷಣೆ ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಜೆ ನೀಡಿದ್ದರಿಂದ ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ.
ಇದನ್ನೂ ಓದಿ: 13 ಜಿಲ್ಲೆಗಳಲ್ಲಿ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್
ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು,ರಸ್ತೆಗಳಿಗೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿಯುತ್ತಿವೆ. ವಾಹನ ಸವಾರರು ಪರದಾಡುತ್ತಿದ್ದಾರೆ, ಬೆಳಗ್ಗೆಯೇ ಟ್ರಾಫಿಕ್ ಜಾಮ್ ಆಗಿದೆ. ಚಳಿಯೂ ಹೆಚ್ಚಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದರು.
ಹೀಗಾಗಿ ಮುಂಜಾಗರೂಕತಾ ಕ್ರಮವಾಗಿ ಜಿಲ್ಲಾಧಿಕಾರಿ ಇಂದು ಶಾಲೆಗಳಿಗೆ ರಜೆ ನೀಡಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದ್ದ ಪೋಷಕರಿಗೆ ಇದರಿಂದ ಅನುಕೂಲವಾಗಿದೆ.