Heavy rain: ರಾಜಧಾನಿಯಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇಂದು (ಬುಧವಾರ) ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹೌದು, ಸತತ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಜಿ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: Nitya Panchanga | ಇಂದು ಬುಧವಾರ 23-10-2024; ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!
ಇವರಿಗೆ ರಜೆ ಇಲ್ಲ..!
ಹಾಗೆಯೇ, ಇಂದು ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.