ದಕ್ಷಿಣ ಕನ್ನಡ: ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಸಲುವಾಗಿ, ಸುಳ್ಯ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಕೂಡ ರಜೆ ನೀಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಭಾರೀ ಭೂಕುಸಿತ, ಹಲವಡೆ ರಸ್ತೆ ಸೇತುವೆಗಳು ಹದಗೆಟ್ಟ ಕಾರಣ ಶಾಲಾ ಮಕ್ಕಳ ಸುರಕ್ಷತೆ ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಕಡಬ ಇನ್ನಿತರ ತಾಲೂಕುಗಳಲ್ಲೂ ಭಾರೀ ಮಳೆ ಇದ್ದಲ್ಲಿ ಶಾಲಾ ಕಾಲೇಜಿಗೆ ರಜೆ ನೀಡುವ ಅಧಿಕಾರವನ್ನು ಅಯಾ ತಾಲೂಕು ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ರವರಿಗೆ ನೀಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.