Heavy rain holiday : ಫೆಂಗಲ್ ಚಂಡಮಾರುತದಿಂದ ರಾಜ್ಯ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಯಾಗುತ್ತಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಇಂದು ಸಹ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಫೆಂಗಲ್ ಸೈಕ್ಲೋನ್‌ನಿಂದಾಗಿ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುಂಜಾಗ್ರಾತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜ ನಗರ, ಮೈಸೂರು, ಉಡುಪಿ, ಮಂಡ್ಯ, ರಾಮನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲಾ -ಕಾಲೇಜು, ರಜೆ ಘೋಷಿಸಲಾಗಿದೆ.
ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಪದವಿ ಕಾಲೇಜುಗಳಿಗೆ ರಜೆ ಇರಲ್ಲ. ಕಾಲೇಜು ಹೊರತುಪಡಿಸಿ ಇತರ ಕಾಲೇಜುಗಳಿಗೆ ರಜೆ ನೀಡಲಾಗಿದೆ.
Heavy rain holiday : ಫೆಂಗಲ್ ಆರ್ಭಟಕ್ಕೆ ಬೆಂಗಳೂರು ಥಂಡಾ.. ರಜೆ ಇಲ್ಲ
ಫೆಂಗಲ್ ಸೈಕ್ಲೋನ್ ಹೊಡೆತಕ್ಕೆ ಬೆಂಗಳೂರು ನಗರ ಥಂಡಾ ಹೊಡೆದಿದೆ. ನಿನ್ನೆ ರಾತ್ರಿಯಿಡೀ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ಜಗಜೀವನ್‌ರಾಮ್ ನಗರದಲ್ಲಿ ಮನೆಯ ಗೋಡೆ ಕುಸಿದಿದೆ.
ಆದರೆ, ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ನಿರಂತರ ಮಳೆಯಿಂದ ನಲುಗಿರುವ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿಲ್ಲ. ಮುಂಜಾಗರೂಕತಾ ಕ್ರಮವಾಗಿ ರಜೆ ನೀಡಿ ಎಂದು ಪೋಷಕರು ಒತ್ತಾಯಿಸುತ್ತಿದ್ದಾರೆ.