Heavy rain : ರಾಜಧಾನಿ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ರಾಜ್ಯದಲ್ಲಿ ಈ ಬಾರಿ ಮಳೆಯ ಆರ್ಭಟ ನಿಲ್ಲುತ್ತಿಲ್ಲ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ, ಒಳನಾಡು ಭಾಗದಲ್ಲಿ ನಾಳೆಯಿಂದಲೇ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು,ಅ. 18 ಮತ್ತು 19 ರಂದು 16 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಬೆಳ್ಳಂಬೆಳಗ್ಗೆ ಬೇಸರದ ಸುದ್ದಿ; ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್‌ಬೈ!
ಅಷ್ಟೇ ಅಲ್ಲ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಗದಗ, ಕಲಬುರ್ಗಿ, ಕೊಪ್ಪಳ ಜಿಲ್ಲೆಯಲ್ಲಿ ಕೂಡ ಭಾರಿ ಮನೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಇನ್ನು, ನಿನ್ನೆ ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಧಾರವಾಡ, ತುಮಕೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.