Heavy rain : ಬೆಂಗಳೂರು ಸೇರಿದಂತೆ ಇನ್ನು ಹಲವು ಜಿಲ್ಲೆಗಳಲ್ಲಿ ಎರಡು ಮೂರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಕೋಲಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇನ್ನು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ದಸರಾ ಹಬ್ಬಕ್ಕೆ ಬಂಪರ್ ಗಿಫ್ಟ್; ಗೃಹಲಕ್ಷ್ಮೀಯರ ಖಾತೆಗೆ ₹4,000..!
Heavy rain : 8 ಜಿಲ್ಲೆಗಳಲ್ಲಿ ಭಾರೀ ಮಳೆ.. ಅಲ್ಲೋಲ-ಕಲ್ಲೋಲ
ರಾಜ್ಯದ 8 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಪಾರ ಪ್ರಮಾಣದ ಬೆಳೆಯೂ ನಾಶವಾಗಿದೆ. ಬೆಂಗಳೂರು, ಯಾದಗಿರಿ, ತುಮಕೂರು, ಬಳ್ಳಾರಿ, ವಿಜಯನಗರ, ಕೊಪ್ಪಳ, ಚಾಮರಾಜನಗರ & ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ.
ಕೂಡ್ಲಿಗಿಯಲ್ಲಿ ಲಾರಿಯೊಂದು ಕೊಚ್ಚಿ ಹೋಗಿದೆ. ಬಳ್ಳಾರಿಯ ಶಂಕರಬಂಡೆ ಬಳಿಯ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರು ಹಾಗೂ ಚಾಲಕನನ್ನು ರಕ್ಷಿಸಲಾಗಿದೆ. ಡಣಾಪುರದಲ್ಲಿ ಮಣ್ಣಿನಲ್ಲಿ ಹೂತುಹೋಗಿದ್ದ ವ್ಯಕ್ತಿಯನ್ನು ಸ್ಥಳೀಯರು ಕಾಪಾಡಿದ್ದಾರೆ.
ಇದನ್ನೂ ಓದಿ: ಇಂದು ನವರಾತ್ರಿಯ ನಾಲ್ಕನೇ ದಿನ ಕೂಷ್ಮಾಂಡಾ ದೇವಿಯ ಆರಾಧನೆ
ಬೆಂಗಳೂರಲ್ಲಿ ಅವಾಂತರ ಸೃಷ್ಟಿಸಿದ ಮಳೆ – Heavy rain in Bangalore
ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರೀ ಮಳೆ ಅವಾಂತರ ಸೃಷ್ಟಿಸಿದೆ. ಹಲವಡೆ ಮನೆಗಳಿಗೆ ನೀರು ನುಗ್ಗಿದೆ. ಶಾಂತಿನಗರ, ಕೋರಮಂಗಲ, ರಿಚ್ಮಂಡ್ ವೃತ್ತ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ ಹಾಗೂ ನಂದಿನಿ ಲೇಔಟ್ ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ವಾಹನ ಸವಾರರು ಪರದಾಟ ನಡೆಸಿದರು. ಭಾರೀ ಮಳೆಯಿಂದ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಕರೆಂಟ್ ಇಲ್ಲದೇ ಕೆಲವು ಅಪಾರ್ಟ್ ಮೆಂಟ್ ನಿವಾಸಿಗಳು ಪರದಾಡಿದ್ದಾರೆ.
ಇದನ್ನೂ ಓದಿ: ದಿನಕ್ಕೊಂದು ಖರ್ಜೂರ ಸೇವಿಸುವುದರಿಂದ ಆಗುವ ಪ್ರಯೋಜನಗಳು..!
ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ – Heavy rain in Hassan
ಇನ್ನು, ಹಾಸನ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಿದ್ದು, ಇದರಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಬೇಕಾಯಿತು. ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಇನ್ನು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಇರುವ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು. ಅದರಂತೆ ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ರೈತರು, ಕಾಫಿ ಬೆಳೆಗಾರರು ತ್ರಿಶಂಕು ಸ್ಥಿತಿಗೆ ಸಿಲುಕಿ ತೊಂದರೆ ಅನುಭವಿಸುವಂತಾಗಿದೆ.