Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ. ತಮಿಳುನಾಡಿನ 11 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಸಿಕ್ಕಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಉಚಿತ ಆಧಾರ್ ಕಾರ್ಡ್ ನವೀಕರಣಕ್ಕೆ ಒಂದೇ ದಿನ ಬಾಕಿ! : ಆಧಾರ್ ಕಾರ್ಡ್ ಆನ್‌ಲೈನ್‌ನಲ್ಲಿ ಉಚಿತವಾಗಿ ನವೀಕರಿಸುವುದು ಹೇಗೆ?
ಇನ್ನು, ರಾಜ್ಯದ ರಾಜಧಾನಿ ಬೆಂಗಳೂರು & ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ನಾಳೆ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಜೊತೆ ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಕೂಡ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.