Heavy rain : ಬಂಗಾಳಕೊಲ್ಲಿಯಲ್ಲಿ ಮತ್ತೆ 2 ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ಇದರ ಪರಿಣಾಮ, ರಾಜ್ಯದಾದ್ಯಂತ ಡಿಸೆಂಬರ್ 13ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೆ 2 ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ಇದರ ಪರಿಣಾಮ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಜನತೆ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಉಳಿದೆ ಕಡೆ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ: Maternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ