ಸಮುದ್ರ ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇಂದೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಂಭವ ಇದೆ. ಮಾಂಡಸ್ ಚಂಡಮಾರುತದ ಪರಿಣಾಮ ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ನಾಳೆಯಿಂದ ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಆ ಬಳಿಕ ಚಳಿ ಹೆಚ್ಚಾಗಲಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಚಾಮರಾಜನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.