ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೆಂಗಳೂರು, ಉತ್ತರ ಕರ್ನಾಟಕ ಭಾಗದ ಹಲವು ಕಡೆ ಭಾರಿ ಮಳೆಯಿಂದ ನೆರೆ ಉಂಟಾಗಿತ್ತು. ನಂತರ ಒಂದು ವಾರ ಕಾಲ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಶಾನ್ಯ ಮಾರುತಗಳು ಈಗಾಗಲೇ ದಕ್ಷಿಣ ಭಾರತವನ್ನು ತಲುಪಿದ್ದು ತಮಿಳುನಾಡಿನ ವಿವಿದ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ 2 ದಿನ ಸಾಧಾರಣ ಮಳೆಯಾಗಲಿದ್ದು, ನವೆಂಬರ್ 1 ರಿಂದ ಮೂರು ದಿನ ಕರಾವಳಿ ಭಾಗ, ವಿಜಯಪುರ, ಗದಗ, ಹಾವೇರಿ, ಬೆಳಗಾವಿ, ರಾಯಚೂರು ಸೇರಿದಂತೆ ಹಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.