heavy rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಇನ್ನೆರೆಡು ಮೂರು ದಿನ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಲ್ಲದೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.
ಇದನ್ನೂ ಓದಿ: ಕೋವಿಡ್‌ಗಿಂತಲೂ ನಿಫಾ ಮರಣ ಪ್ರಮಾಣ ಹೆಚ್ಚು; ಕೊರೊನಾ ರೀತಿಯಲ್ಲೇ ಹೊಸ ಗೈಡ್‌ಲೈನ್ಸ್ ಜಾರಿ
heavy rain: ಈ ಪ್ರದೇಶಗಳಲ್ಲಿ ಮಳೆ: ಎಚ್ಚರಿಕೆ ಸೂಚನೆ

ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಸೇರಿದಂತೆ 8 ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು,ಇಂದಿಂದ ಸೆಪ್ಟೆಂಬರ್ 18ರವರೆಗೆ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿದ್ದು, 17ರಂದು ಅಂಡಮಾನ್, ನಿಕೋಬಾರ್ ದ್ವೀಪ ದಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ತೆಲಂಗಾಣ, ಕೇರಳ ದಲ್ಲಿ ಶನಿವಾರ ವಿಪರೀತ ಮಳೆಯಾಗ ಲಿದ್ದು, ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ಇರಲಿದೆ.
ಇದನ್ನೂ ಓದಿ: ಈ ರಾಶಿಯವರ ಮೇಲೆ ಗಣೇಶನ ವಿಶೇಷ ಕೃಪೆ, ಎಲ್ಲಾ ವಿಘ್ನಗಳು ದೂರವಾಗುತ್ತೆ..!
heavy rain: ಇಂದಿನ ಹವಾಮಾನ ವರದಿ
ಇನ್ನು, ಮುಂದಿನ 3 ದಿನ ಹಲವೆಡೆ ಅತಿ ಹೆಚ್ಚು ಮಳೆಯಾಗುವ ಸಂಭವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು,ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬೇರೆ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಇನ್ನು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ: ಮಧುಮೇಹಿಗಳಿಗೆ 5 ಆರೋಗ್ಯಕರ ಪಾನೀಯಗಳು; ಒಮ್ಮೆ ಟ್ರೈ ಮಾಡಿ ನೋಡಿ..!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |