Heavy rain | ರಾಜ್ಯದಲ್ಲಿ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಯೆಲ್ಲೋ ಅಲರ್ಟ್‌ ಘೋಷಣೆ

Heavy rain : ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದ್ದು, ಇಂದಿನಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ನವೆಂಬರ್ 2 ರವರೆಗೆ ದಕ್ಷಿಣ…

Heavy rain

Heavy rain : ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದ್ದು, ಇಂದಿನಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ನವೆಂಬರ್ 2 ರವರೆಗೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದು, ಬೆಂಗಳೂರಿನಲ್ಲಿ ಕೂಡ ಮಿಂಚು, ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು 2 ರಂದು ಭಾರಿ ಮಳೆಯಾಗಲಿದ್ದು,ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಇದನ್ನೂ ಓದಿ: Kannada Rajyotsava Award | ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪಟ್ಟಿ ಪ್ರಕಟ; ಸಂಪೂರ್ಣ ಪಟ್ಟಿ ಇಲ್ಲಿದೆ

Vijayaprabha Mobile App free

Heavy rain : ಎಲ್ಲಿಲ್ಲಿ ಮಳೆ..?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: Diwali Lakshmi Puja | ಇಂದು ದೀಪಾವಳಿ, ಲಕ್ಷ್ಮಿ ಪೂಜೆ ಹೀಗೆ ಮಾಡಿ; ದೇವಿ ಕೃಪೆಗೆ ಪಾತ್ರರಾಗಿ

Heavy rain : ಬೆಂಗಳೂರು ನಗರದ ಹಲವಡೆ ಧಾರಾಕಾರ ಮಳೆ

ಇನ್ನು, ಬೆಂಗಳೂರು ನಗರದ ಹಲವೆಡೆ ನಿನ್ನೆ ಮತ್ತೆ ಧಾರಾಕಾರ ಮಳೆಯಾಗಿದ್ದು, RR ನಗರ, ಕೆಂಗೇರಿ, ವಿಜಯನಗರ , ಬ್ಯಾಟರಾಯನಪುರ, ಚಂದ್ರಲೇಔಟ್, ಜ್ಞಾನಭಾರತಿ, ನಾಗರಬಾವಿ, ಸುಮ್ಮನಹಳ್ಳಿ ಸೇರಿದಂತೆ ಹಲವೆಡೆ ನಗರದ ಹಲವೆಡೆ ಮಳೆಯಾಗಿದೆ.

ಭಾರಿ ಮಳೆಯಿಂದಾಗಿ ಸುಮ್ಮನಹಳ್ಳಿ ಜಂಕ್ಷನ್ ಬಳಿ ಟ್ರಾಫಿಕ್ ಜಾಮ್​​ ಉಂಟಾಗಿದ್ದು, ಟ್ರಾಫಿಕ್ ಜಾಮ್​ನಿಂದ ವಾಹನ ಸವಾರರು ಪರದಾಡಿದ್ದು, ಟ್ರಾಫಿಕ್​ ನಿಯಂತ್ರಣಕ್ಕೆ ಸಂಚಾರಿ ಪೊಲೀಸರು ಹರಸಾಹಸ ಪಟ್ಟರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.