Heavy rain: ಇಂದಿನಿಂದ ಮುಂಗಾರು ಚುರುಕಾಗಲಿದ್ದು, ಇಂದು ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಸೇರಿ ಹಲವು ಕಡೆಗಳಲ್ಲಿ ಮುಂದಿನ 5ದಿನ ಭಾರೀ ಮಳೆಯಾಗಲಿದೆ ಎಂದು IMD ಎಚ್ಚರಿಕೆ ನೀಡಿದೆ.
ಕರ್ನಾಟಕದ ಅರ್ಧ ಪ್ರದೇಶದಲ್ಲಿ ಮುಂಗಾರು ಮಳೆ ಸುರಿತ್ತಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಇನ್ನಷ್ಟು ತೀವ್ರಗೊಂಡಿದ್ದು, ಉತ್ತರ ಒಳನಾಡಿಗೆ ಮಳೆ ಬಾರದೆ ರೈತರು ಕಂಗಾಲಾಗಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಅತ್ಯಧಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ.. ಮತ್ತೆ 3 ತಿಂಗಳು ವಿಸ್ತರಣೆ!
Heavy rain: ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಬೀಳಲಿದೆ. ಈ 3 ಜಿಲ್ಲೆಗಳಲ್ಲಿ 115-204 ಮಿ.ಮೀ. ಮಳೆಯಾಗುವ ಕಾರಣ 5 ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಜು.4ರಿಂದ ಒಳನಾಡು ಜಿಲ್ಲೆಗಳಲ್ಲಿಯೂ ವರುಣ ಅಬ್ಬರಿಸಲಿದ್ದು, ತುಮಕೂರು, ಮೈಸೂರು, ಹಾಸನ, ಬೆಳಗಾವಿ, ಹಾವೇರಿ & ಧಾರವಾಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Heavy rain: ರಾಜ್ಯದ ಇಂದಿನ ಹವಾಮಾನ ವರದಿ
ಇನ್ನು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ: ರೂ.200ಕ್ಕಿಂತ ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್; ಈ ರೇಷನ್ ಕಾರ್ಡ್ ಇದ್ದರೆ ರೂ.2,400 ರಿಯಾಯಿತಿ!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ ಮಾಡಿ |