ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಚಂಡ ಮಾರುತದ ಪರಿಣಾಮ ಮುಂದಿನ ಮೂರು ದಿನ (ಅ.22ರವರೆಗೆ) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹೌದು, ಅ.20ರಂದು ಉತ್ತರ ಅಂಡಮಾನ್ ಸಮುದ್ರದಲ್ಲಿ ಸೈಕ್ಲೋನಿಕ್ ಪರಿಚಲನೆ ಉಂಟಾಗಲಿದ್ದು, ಇದು ಕರ್ನಾಟಕ, ರಾಯಲಸೀಮಾ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಮೇಲೆ ಪರಿಣಾಮ ಬೀರುತ್ತದೆ. ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನ-ಬೆಳ್ಳಿಯ ಬೆಲೆ ಎಷ್ಟು..?
ಇದರ ಪರಿಣಾಮ ಅ.21 ರವರೆಗೆ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ