Heavy rain : ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜೊತೆಗೆ ಕರ್ನಾಟಕದಲ್ಲೂ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಡಿಸೆಂಬರ್ 28ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: ಶಾಕಿಂಗ್ ಘಟನೆ: ಶಿಶುವಿನ ಅರ್ಧ ದೇಹ ತಿಂದ ನಾಯಿ
ಬೆಂಗಳೂರು ಸೇರಿ ವಿವಿಧೆಡೆ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಬೆಂಗಳೂರು, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾ., ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಬಾಗಲಕೋಟೆ, ಉಡುಪಿ, ದ. ಕನ್ನಡ ಮತ್ತು ಉ. ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.