Heavy rain: ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4ದಿನ ಆರು ಜಿಲ್ಲೆಗಳಲ್ಲಿ ಭಾರೀ ಮಳೆ (Heavy rains) ಯಾಗಲಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಹೌದು, ನಿನ್ನೆಯಿಂದಲೇ ಕರಾವಳಿ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಮಳೆ (Heavy rain) ಅಬ್ಬರಿಸುತ್ತಿದ್ದು, ಇಂದೂ ಸಹ ಈ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಬೆಳಗಾವಿ, ಧಾರವಾಡ, ಹಾವೇರಿ, ತುಮಕೂರು, ಮೈಸೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮಾನ್ಸೂನ್ ಮತ್ತಷ್ಟು ಚುರುಕಾಗುವ ಸೂಚನೆ ಸಿಕ್ಕಿದೆ.
ಇದನ್ನು ಓದಿ: ಉತ್ತರಾಷಾಢ ನಕ್ಷತ್ರದ ಪ್ರಭಾವದಿಂದ ಇಂದು ಕರ್ಕಾಟಕ, ತುಲಾ ರಾಶಿಯವರಿಗೆ ಧನ ಲಾಭ…!
Heavy rain: ಶಾಲಾ-ಕಾಲೇಜುಗಳಿಗೆ ರಜೆ?
ಇನ್ನು, ಚಿಕ್ಕಮಗಳೂರು, ಕೊಡುಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ (Heavy rain) ಯಾಗಲಿದ್ದು, ಆಯಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಚಿಂತನೆ ಸಹ ನಡೆಯುತ್ತಿದೆ. ದಕ್ಷಿಣ ಕನ್ನಡದಲ್ಲಿ ತಹಶೀಲ್ದಾರ್‌ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ DC ಆದೇಶಿಸಿದ್ದಾರೆ. ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ ಮಾಡಿ |
ಇದನ್ನು ಓದಿ: ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ