ಬೆಂಗಳೂರು: ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ವಿಜಯಪುರ, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಕೊಂಕಣ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ, ಕರಾವಳಿ ಕರ್ನಾಟಕದ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತಮಿಳುನಾಡು, ಪುದುಚೇರಿ, ಕಾರೈಕಲ್ ಕೇರಳದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.