ಬೆಂಗಳೂರು: ನೈಋತ್ಯ ಮಾನ್ಸೂನ್ ಮಾರುತಗಳು ದುರ್ಬಲಾಗಿದ್ದರು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು ಇಂದಿನಿಂದ ಜೂನ್ 11, 12ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜೂನ್ 13, 14ರಂದು ಅಧಿಕ ಮಳೆಯಾಗುವ ನಿರೀಕ್ಷೆಯಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು, ಉಳಿದಂತೆ ಜೂನ್ 13, 14ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು ಆರೆಂಜ್ ಅಲರ್ಟ್ ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.