Heavy rain : ಫೆಂಗಲ್ ಚಂಡಮಾರುತ ಅಬ್ಬರ ಕಮ್ಮಿಯಾಗುತ್ತಿದ್ದಂತೆಯೇ ಮತ್ತೆರಡು ಸೈಕ್ಲೋನ್ ಸೃಷ್ಟಿಯಾಗುವ ಲಕ್ಷಣ ಕಂಡುಬಂದಿದ್ದು, ಮುಂದಿನ 10 ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ 2 ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.
ಹೌದು, ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ಪರಿಚಲನೆ ಕಂಡುಬಂದಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಡಿಸೆಂಬರ್ 14ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, 2 ನೇ ವಾಯುಭಾರ ಕುಸಿತ ಡಿ.16ಕ್ಕೆ ಉಂಟಾಗಲಿದ್ದು, ಡಿ.17-18ಕ್ಕೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಸೂಚನೆ ನೀಡಿದ್ದಾರೆ.