ರಾಜ್ಯದಲ್ಲಿ ಜುಲೈ 19ರವರೆಗೆ ಭಾರಿ ಮಳೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್!

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಎರಡು ದಿನ ತುಂತುರು ಮಳೆಯಾಗಲಿದ್ದು, ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

rain vijayaprabha news

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಎರಡು ದಿನ ತುಂತುರು ಮಳೆಯಾಗಲಿದ್ದು, ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಜುಲೈ 19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಜುಲೈ 19 ರವರೆಗೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಜುಲೈ 18ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಹಾವೇರಿ, ಯಾದಗಿರಿ, ಕಲಬುರಗಿ, ಬೀದರ್, ಚಾಮರಾಜನಗರ & ದಾವಣಗೆರೆಯಲ್ಲಿ ಇಂದು, ನಾಳೆ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.